ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ 5 ಪಂದ್ಯಗಳ ಟೆಸ್ಟ್ ಸರಣಿ ಡ್ರಾನಲ್ಲಿ ಅಂತ್ಯಗೊಂಡಿದೆ. ಓವಲ್ನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ರಣರೋಚಕ ಜಯ ಸಾಧಿಸಿದೆ.
ರಣರೋಚಕತೆಯಿಂದ ಕೂಡಿದ್ದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲಲು ಕೊನೆಯ ದಿನವಾದ ಇಂದು 35 ರನ್ ಬೇಕಿತ್ತು. ಇತ್ತ ಟೀಂ ಇಂಡಿಯಾಗೆ ಗೆಲ್ಲಲು 4 ವಿಕೆಟ್ಗಳ ಅವಶ್ಯಕತೆ ಇತ್ತು. ಐದನೇ ದಿನವಾದ ಇಂದು ಕೇವಲ ಕೆಲವೇ ಓವರ್ಗಳಲ್ಲಿ ಇಂಗ್ಲೆಂಡ್ ತಂಡವನ್ನು ಆಲ್ಔಟ್ ಮಾಡುವ ಮೂಲಕ ಟೀಂ ಇಂಡಿಯಾ 6 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಭಾರತ ತಂಡದ ಗೆಲುವಿನಲ್ಲಿ ವೇಗದ ಬೌಲರ್ಗಳಾದ ಮೊಹಮ್ಮದ್ ಸಿರಾಜ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಪಾತ್ರ ಮಹತ್ವದ್ದಾಗಿದೆ. ಎರಡನೇ ಇನ್ಸಿಂಗ್ನಲ್ಲಿ ಮೊಹಮ್ಮದ್ ಸಿರಾಜ್ 5 ವಿಕೆಟ್ ಪಡೆದ್ರೆ ಇತ್ತ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಪಡೆಯುವ ಮೂಲಕ ಭಾರತದ ಯಶಸ್ವಿ ಗೆಲುವಿಗೆ ಕಾರಣರಾಗಿದ್ದಾರೆ.
5ನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಿದ ಟೀಂ ಇಂಡಿಯಾ 224 ರನ್ಗಳಿಗೆ ಆಲ್ಔಟ್ ಆಗುತ್ತದೆ. ಇಂಗ್ಲೆಂಡ್ ಮೊದಲ ಇನ್ಸಿಂಗ್ಸ್ನಲ್ಲಿ 247 ರನ್ಳಿಗೆ ಸರ್ವಪತನವಾಗುತ್ತದೆ. 2ನೇ ಇನ್ನಿಂಗ್ಸ್ನಲ್ಲಿ ಭಾರತ 396 ರನ್ ಗಳಿಸುವ ಮೂಲಕ ಇಂಗ್ಲೆಂಡ್ಗೆ 374ರನ್ಗಳ ಟಾರ್ಗೆಟ್ ನೀಡುತ್ತದೆ.
374 ರನ್ಗಳ ಟಾರ್ಗೆಟ್ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಭಾರತ ತೀವ್ರ ಪೈಪೋಟಿ ನೀಡಿದ್ದು, 367 ರನ್ ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡುವ ಮೂಲಕ ಭಾರತ ವಿರೋಚಿತ ಗೆಲುವು ಸಾಧಿಸಿತು. ಈ ಮೂಲಕ ಭಾರತ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ 2-2 ಅಂತರದಲ್ಲಿ ಸಮಬಲ ಸಾಧಿಸಿಕೊಂಡಿದೆ.


