Wednesday, November 19, 2025
21.1 C
Bengaluru
Google search engine
LIVE
ಮನೆದೇಶ/ವಿದೇಶಛತ್ತಿಸ್​​​​ಗಢದ ಬಿಲಾಸ್ಪುರದಲ್ಲಿ ಗೂಡ್ಸ್​​​ ರೈಲಿಗೆ ಪ್ಯಾಸೆಂಜರ್​​ ರೈಲು ಡಿಕ್ಕಿ: 6 ಜನ ಸಾವು

ಛತ್ತಿಸ್​​​​ಗಢದ ಬಿಲಾಸ್ಪುರದಲ್ಲಿ ಗೂಡ್ಸ್​​​ ರೈಲಿಗೆ ಪ್ಯಾಸೆಂಜರ್​​ ರೈಲು ಡಿಕ್ಕಿ: 6 ಜನ ಸಾವು

ರಾಯ್​​​​ಪುರ: ಗೂಡ್ಸ್​​​ ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲಿನಲ್ಲಿದ್ದ 6 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ..

ಬಿಲಾಸ್‌ಪುರದ ಲಾಲ್‌ಖಾದನ್ ಬಳಿ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದ್ದು, ರೈಲಿನ ಬೋಗಿಗಳು ಹಳಿತಪ್ಪಿವೆ. 2 ರೈಲು ನಿಲ್ದಾಣಗಳ ನಡುವಿನ ಅಪ್‌ಲೈನ್‌ನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಸುಮಾರು 6 ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡರಿಂದ ಮೂವರು ಗಾಯಗೊಂಡಿದ್ದಾರೆ.

ರೈಲ್ವೆ ರಕ್ಷಣಾ ತಂಡಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ತುರ್ತು ವೈದ್ಯಕೀಯ ತಂಡಗಳು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿವೆ. ಈ ಅಪಘಾತದ ಬಳಿಕ ಈ ಮಾರ್ಗವಾಗಿ ಸಂಚರಿಸಬೇಕಿದ್ದ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಕೆಲವು ರೈಲುಗಳನ್ನು ಬೇರೆ ಕಡೆಗೆ ತಿರುಗಿಸಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments