Top Newsರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ 6 ನಕ್ಸಲರು ಶರಣಾಗತಿ

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ.

ಸದ್ಯ ಇದೀಗ ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಗೃಹ ಕಛೇರಿ ಕೃಷ್ಣಾದದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂಡುಗಾರು ಲತಾ, ವನಜಾಕ್ಷಿ, ಸುಂದರಿ, ಮಾರಪ್ಪ ಅರೋಳಿ, ವಸಂತ್ ಹಾಗೂ ಎನ್.ಜೀಶಾ ಇವರುಗು ಶಸ್ತಸ್ತ್ರ ತ್ಯಜಿಸಿ ಶರಣಾಗಿದ್ದಾರೆ. ಇನ್ನು ಶರಣಾದ ನಕ್ಸಲರಿಗೆ ಸರ್ಕಾರ ಭರ್ಜರಿ ಪ್ಯಾಕೇಜ್ ಕೂಡ ಘೋಷಿಸಿದೆ.

ಇನ್ನು ತಮ್ಮ ಸಮ್ಮುಖದಲ್ಲೇ ಮುಖ್ಯವಾಹಿನಿ ಬಂದಿರುವ ನಕ್ಸಲರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭ ನಡೆಸಿದ್ದು, ಅವರ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ್ದಾರೆ. ಅಲ್ಲದೇ ಅವರ ಪ್ರೋತ್ಸಾಹ ಧನದ ಚರ್ಚಿಸಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ನಕ್ಸಲರು ಚರ್ಚಿಸಿ ಮುಖ್ಯವಾಹಿನಿಗೆ ಬರಲು ಇಂಗಿತ ವ್ಯಕ್ತಡಿಸಿದ್ದರು. ಈ ಮೂಲಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮುಂದೆ ಶರಣಾಗತಿಗೆ ಎಲ್ಲಾ ಮಾತುಕತೆ ಆಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಲು ತೀರ್ಮಾನಿಸಿದ್ದು, ಅದರಂತೆ ಇಂದು ಬೆಳಗ್ಗೆ ಪೊಲೀಸ್ ಬಂದೋಬಸ್ತ್​ನಲ್ಲಿ. ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸಂಜೆ 6 ಗಂಟೆ ಹೊತ್ತಿಗೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿತು. ಆ ತಂಡವನ್ನು ಚೆಕ್ ಇನ್ ಮಾಡಿ ಪೊಲೀಸರು ಒಳಗೆ ಬಿಟ್ಟರು. ಸಿಎಂ ಕಚೇರಿ ಮುಂದೆ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

Comments (0)

Your email address will not be published. Required fields are marked *

Back to top button