ದೇಶ/ವಿದೇಶರಾಜ್ಯಸುದ್ದಿ

ತಂಬಾಕು ಉದ್ಯಮಿ ಪುತ್ರನ ಅತಿವೇಗದ ಚಾಲನೆಗೆ 6 ಮಂದಿ ದಾರುಣ ಸಾವು?

ಉತ್ತರ ಪ್ರದೇಶ: ಕಾನ್ಪುರದಲ್ಲಿ ಪ್ರಸಿದ್ಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ, ಸುಮಾರು 10 ಕೋಟಿ ರೂ. ಬೆಲೆಯ ಲ್ಯಾಂಬೋರ್ಘಿನಿ ರೆವೆಲ್ಟೊ ಐಷಾರಾಮಿ ಕಾರನ್ನು ಪಾದಚಾರಿಗಳು ಮತ್ತು ವಾಹನಗಳ ಮೇಲೆ ಹತ್ತಿಸಿದ್ದಾನೆ.

ಮದ್ಯಪಾನ ಮಾಡಿ ಅತಿ ವೇಗವಾಗಿ ಕಾರು ಚಲಾಯಿಸುತ್ತಿದ್ದ ಶಿವಂ ಮಿಶ್ರಾ, ಮೊದಲು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಅದರ ಸವಾರ ಸುಮಾರು 10 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್‌ನ ಮುಂಭಾಗದ ಚಕ್ರವನ್ನು ಕಾರು ಸ್ವಲ್ಪ ದೂರ ಎಳೆದುಕೊಂಡು ಹೋಗಿ, ಕೊನೆಗೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಈ ಭೀಕರ ಅಪಘಾತದಲ್ಲಿ ಒಟ್ಟು ಆರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿದ್ದು, ಐಷಾರಾಮಿ ಕಾರಿನ ಅತಿವೇಗದ ಚಾಲನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಶಿವಂ ಮಿಶ್ರಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

Comments (0)

Your email address will not be published. Required fields are marked *

Back to top button