ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶದ ಬಳಿಕ ಕಠಿಣ ಕ್ರಮಗಳನ್ನು ಘೋಷಿಸಿದೆ.. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕನಿಷ್ಠ 70% ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮತ್ತು ಲಸಿಕೆ ಕಡ್ಡಾಯಗೊಳಿಸಿವೆ.ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವ ಜೊತೆಗೆ, ಮಾನವೀಯವಾಗಿ ಬೀದಿ ನಾಯಿಗಳ ಜನಸಂಖ್ಯೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ.
ಭಾರತದಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನ ಆದೇಶದನಂತರ ಕಠಿಣ ಕ್ರಮಗಳನ್ನು ಘೋಷಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕನಿಷ್ಠ 70% ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ (ಸ್ಟೆರಿಲೈಸೇಶನ್) ಮತ್ತು ಲಸಿಕೆ (ವ್ಯಾಕ್ಸಿನೇಷನ್) ಕಡ್ಡಾಯಗೊಳಿಸಿವೆ. ಈ ಕ್ರಮವು ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವ ಜೊತೆಗೆ, ಮಾನವೀಯವಾಗಿ ಬೀದಿ ನಾಯಿಗಳ ಜನಸಂಖ್ಯೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ.
ಸುಪ್ರೀಂ ಕೋರ್ಟ್‌ನ ಆದೇಶದ ಪ್ರಕಾರ ಬೀದಿ ನಾಯಿಗಳನ್ನು ಸಂತಾನಶಕ್ತಿ ಹರಣ ಮತ್ತು ಲಸಿಕೆಗೆ ಒಳಪಡಿಸಿದ ನಂತರ ಅವುಗಳ ಮೂಲ ಸ್ಥಳಕ್ಕೆ ಬಿಡುಗಡೆ ಮಾಡಬೇಕು. ಈ ಆದೇಶವು ಹಿಂದಿನ ಜನ್ಮ ನಿಯಂತ್ರಣ ನಿಯಮಗಳಿಗೆ ಅನುಗುಣವಾಗಿದ್ದು, ರೇಬೀಸ್‌ನಂತಹ ರೋಗಗಳಿಂದ ಸಾರ್ವಜನಿಕರಿಗೆ ರಕ್ಷಣೆ ನೀಡುವ ಜೊತೆಗೆ, ನಾಯಿಗಳ ಮೇಲಿನ ದೌರ್ಜನ್ಯವನ್ನು ತಡೆಯುವ ಗುರಿಯನ್ನು ಹೊಂದಿದೆ. ಕೇಂದ್ರ ಸರ್ಕಾರವು ಈ ಆದೇಶವನ್ನು ಎಲ್ಲ ರಾಜ್ಯಗಳಿಗೆ ಕಡ್ಡಾಯಗೊಳಿಸಿದ್ದು, ಪ್ರತಿ ರಾಜ್ಯವು ತಿಂಗಳಿಗೊಮ್ಮೆ ಪ್ರಗತಿ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿದೆ.