TUMKURಜಿಲ್ಲೆ

ತುಮಕೂರಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ!

8th-grade student dies of heart attack in Tumakuru!

ತುಮಕೂರು : 8ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ತುಮಕೂರಿನ ಪಾವಗಡ ತಾಲೂಕಿನಲ್ಲಿ ನಡೆದಿದೆ. ಪ್ರಿಯಾಂಕಾ (14) ಮೃತ ಬಾಲಕಿ. 

ಈ ಘಟನೆ ಪಾವಗಡ ತಾಲೂಕಿನ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್​ನಲ್ಲಿ ನಡೆದಿದೆ. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕಾ, ಚಿಕಿತ್ಸೆಗಾಗಿ ತನ್ನ ಸ್ವಗ್ರಾಮಕ್ಕೆ ತೆರಳಿದ್ದಳು. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಬಾಲಕಿ ವಾಪಸ್ ಹಾಸ್ಟೆಲ್​ಗೆ ಮರಳಿದ್ದಳು.

ನಿನ್ನೆ ಮುಂಜಾನೆ ವೇಳೆ ಪ್ರಿಯಾಂಕಾ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ಸಮಯದಲ್ಲಿ ಕುಸಿದುಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಹಾಸ್ಟೆಲ್‌ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಸ್ಪತ್ರೆಗೆ ಬಾಲಕಿಯನ್ನು ಕರೆತರುವ ಮುನ್ನವೇ ಸಾವನ್ನಪ್ಪಿದ್ದಾಳೆ.

Comments (0)

Your email address will not be published. Required fields are marked *

Back to top button