ದೇಶ/ವಿದೇಶಸುದ್ದಿ

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, ಹಲವರಿಗೆ ಗಾಯ

ವಿಶಾಖಪಟ್ಟಣಂ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್​ವೊಂದ್​​​ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ಸಿನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು. ಬಸ್ ತೆಲಂಗಾಣದ ಭದ್ರಾಚಲಂನಿಂದ ಅನ್ನಾವರಂಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ. ಚಿಂತೂರು ಮತ್ತು ಭದ್ರಾಚಲಂ ನಡುವಿನ ಘಾಟ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಅಪಘಾತ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

ಅಪಘಾತದ ಸುದ್ದಿ ಕೇಳಿ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಚಿತ್ತೂರು ಜಿಲ್ಲೆಯ ಅಲ್ಲೂರಿ ಸೀತಾರಾಮ ರಾಜು ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತ ಸುದ್ದಿ ನಮ್ಮನ್ನು ತೀವ್ರವಾಗಿ ಆಘಾತಗೊಳಿಸಿದೆ. ಈ ಅಪಘಾತದಲ್ಲಿ ಹಲವಾರು ಜೀವಗಳು ಬಲಿಯಾಗಿವೆ ಎಂಬುದು ಹೃದಯವಿದ್ರಾವಕ. ಅಪಘಾತದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ನೀಡಲಾಗುತ್ತಿರುವ ಸಹಾಯದ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದೇನೆ.

ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಸಿಗುವಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button