2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಬಿಜೆಪಿ ಪ್ರಕಟಿಸಿರುವ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜಕೀಯ ಚುವಟಿಕೆಗಳು ಗರಿಗೇದರಿವೆ. ಅದರಲ್ಲೂ ಕರ್ನಾಟಕದ ರಾಜಕೀಯಲ್ಲಿ ಅಚ್ಚರಿ ಬೆಳವಣಿಗೆ ನಡೆಯಲಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕಳೆದ ಮೂರು ಅವಧಿಯಲ್ಲೂ ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಸ್ಪರ್ಧೆ ಮಾಡುತ್ತಿದ್ದರು.
ಕೇಂದ್ರ ಬಿಜೆಪಿ ಕೋರ್ ಕಮಿಟಿ ಈಗಾಗಲೇ ಸಭೆ ಮೇಲೆ ಸಭೆ ನಡೆಸಿದ್ದು ಬಹುತೇಕ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಬಿಜೆಪಿ ಹಾಗೂ ಜೆಡಿಎಸ್ ಈಗಾಗಲೇ ಕ್ಷೇತ್ರಗಳನ್ನು ಹಂಚಿಕೆ ಮಾಡಿದೆ. ಅದ್ರಲ್ಲೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇದೀಗ ಅಚ್ಚರಿಗೆ ಕಾರಣವಾಗಿದೆ.
ರಾಜ್ಯದ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯಿಂದ ಟಿಕೆಟ್ ಆಯ್ಕೆ ಹಿನ್ನೆಲೆ, ಇಂದು ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಬೆಯಲ್ಲಿ ಸಂ ಸದೀಯ ಮಡಳಿ ಸದಸ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ.