Wednesday, April 30, 2025
29.1 C
Bengaluru
LIVE
ಮನೆರಾಜಕೀಯಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಕೆಶಿ

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಕೆಶಿ

ನವದೆಹಲಿ: “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು..”ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ” ಎಂದು ಹೇಳಿದರು.

ಸಚಿವ ಮಹದೇವಪ್ಪ ಅವರ ಹೇಳಿಕೆಗೆ ಡಿ.ಕೆ ಶಿವಕುಮಾರ್‌ “ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ” ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments