Freedom TV

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೆ: ಹೊಸ ಟರ್ಮಿನಲ್​ಗೆ ಪ್ರಧಾನಿ ಶಂಕುಸ್ಥಾಪನೆ

ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದುವರೆದ ಭಾಗವಾಗಿ ಈಗ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಬದಲಾಗುತ್ತಿದೆ.‌ ಈ‌ ನಿಟ್ಟಿನಲ್ಲಿ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸ್ತು ಅಂದಿದ್ದು, ಇಂದು ವರ್ಚ್ಯುಯಲ್ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಇಂದು  ಉತ್ತರ ಪ್ರದೇಶದ ಅಜಂಗಢದಿಂದ ಪ್ರಧಾನಿ ಮೋದಿ ಅವರು ವರ್ಚ್ಯುವಲ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿಯನ್ನು ಕೈಗೊಂಡಿದ್ದು, ವಿಶ್ವ ದರ್ಜೆಯ ವಿಮಾನ ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಂಡಿದೆ ಎಂದು ವಿಮಾನ ನಿಲ್ದಾಣದ ಕಾರ್ಯ ನಿರ್ವಾಹಕ ನಿರ್ದೇಶಕ ಮನೋಜ್ ಶೇಖರನ್ ತಿಳಿಸಿದ್ದಾರೆ.

ವಿಶ್ವದರ್ಜೆ ವಿಮಾನ ನಿಲ್ದಾಣ ನಿರ್ಮಾಣ ಪ್ರಯತ್ನದಲ್ಲಿ ಪ್ರಹ್ಲಾದ ಜೋಶಿ ಸಫಲ

ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಶ್ವದರ್ಜೆ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಿ ಮನವಿ ಮಾಡಿದರು. ‌ಈ ಮನವಿಗೆ ಅಸ್ತು ಅಂದಿರೋ ಪ್ರಧಾನಿ ನರೇಂದ್ರ ಮೋದಿಯವರು 350 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವಲ್ಲಿದ್ದಾರೆ.

Comments (0)

Your email address will not be published. Required fields are marked *

Back to top button