#Exclusive Newsಜ್ಯೋತಿಷ್ಯ

ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ; ಯಶ್ವಂತ ಗುರೂಜಿ ಸ್ಫೋಟಕ ಭವಿಷ್ಯ

ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.ಬಿಜೆಪಿ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿದೆ. ಭರ್ಜರಿ ಪ್ರಚಾರ ಮಾಡುತ್ತಿದೆ.ಅದ್ರೆ ಇದೇ ಹೊತ್ತಲ್ಲಿ ಅವರ ಕನಸಿಗೆ ಎಳ್ಳುನೀರು ಬಿಡುವಂತಹ ಭವಿಷ್ಯ ಬಯಲಾಗಿದೆ. ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಕಾಲಜ್ಞಾನಿ ಯಶ್ವಂತ ಗುರೂಜಿ ಇಂತಹ ಭವಿಷ್ಯ ನುಡಿದಿದ್ದಾರೆ.ಅದೇನು ಅಂತೀರಾ ಈ ಸ್ಟೋರಿ ನೋಡಿ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಲಿದ್ದು ದೇಶಕ್ಕೆ ಮಾಹಿಳಾ ಪ್ರಧಾನಿ ಸಿಗಲಿದ್ದಾರೆ. ಬಳಿಕ ಅವರು ಪುರುಷರಿಗೆ ಬಿಟ್ಟುಕೊಡಲಿದ್ದಾರೆ ಎಂದು ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.

pm

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ 135 ಸೀಟು ಪಡೆಯಲಿದೆ. ಹಿಂದೆ ಯಶ್ವಂತ ಗುರೂಜಿ ನಿಖರ ಭವಿಷ್ಯ ನುಡಿದಿದ್ದರು. ಅಲ್ಲದೆ ಕೊರೊನಾ ಮಹಾಮಾರಿ ಬರುವ ಬಗ್ಗೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋ ಬಗ್ಗೆ ಗುರೂಜಿ ಭವಿಷ್ಯ ನುಡಿದಿದ್ದರು. ಸದ್ಯ ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಈ‌ ಬಾರಿ ಒಬ್ಬಳು ಸ್ತ್ರೀ, ಪುರುಷನ ಎದುರು ದುರ್ಗಿಯಾಗಿ ನಿಂತು ಪುರುಷನಿಗೆ ಭಯ ಹುಟ್ಟಿಸಿ ತಾನೇ ಅಧಿಕಾರವನ್ನ ಮಾಡುವಳು. ತಾಯಿ ಮಮತೆಯಿಂದ ತನ್ನ ಅಧಿಕಾರವನ್ನ ಮಾತೃ ವಾತ್ಸಲ್ಯದಿಂದ ಪರರಿಗೆ ಬಿಟ್ಟುಕೊಡುವಳು.

ಹೀಗಂತಾ ಕಾಲಜ್ಞಾನದಲ್ಲಿ ಉಲ್ಲೇಖವಾದ ಚುನಾವಣಾ ಭವಿಷ್ಯವನ್ನು ಯಶ್ವಂತ ಗುರೂಜಿ ನುಡಿದಿದ್ದಾರೆ.

ಕಾಲಜ್ಞಾನದ ಪ್ರಕಾರ ಪ್ರಧಾನಿಯಾಗೋ ಯೋಗ ಹೊಂದಿರೋದು ಪ್ರಿಯಾಂಕ ಗಾಂಧಿ ಅವರು. ಬಳಿಕ ರಾಹುಲ್ ಗಾಂಧಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ.

ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೇ ಮೋದಿ ಅವರಿಗೆ ಪ್ರಧಾನಿಯಾಗೋ ಯೋಗವಿತ್ತು. ಆದರೇ ಈಗ ಮೋದಿ ಅವರಿಗೆ ಆ ಯೋಗ ಇಲ್ಲ. ಅವರಿಗೆ ಅನಾರೋಗ್ಯ ಕಾಡಬಹುದು.

ಸದ್ಯ ಪ್ರಿಯಾಂಕ ಗಾಂಧಿಗೆ ಹಂಸಕ, ಚಂದ್ರಮಂಗಳ, ಬುಧಾಧಿತ್ಯ ಯೋಗ ಶುರುವಾಗಿದೆ. ಈ ಯೋಗದಿಂದಲೇ ಪ್ರಧಾನಿ ಪಟ್ಟ ಸಿಗೋ ಅವಕಾಶ ಒದಗಿಬರಲಿದೆ.

ಅನ್ಯ ಪಕ್ಷಗಳ ಬಲದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾ ಭವಿಷ್ಯ ಇದೆ

ಎಂದು ಯಶ್ವಂತ ಗುರೂಜಿ ನೊಣವಿನಕೆರೆಯಲ್ಲಿ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ.

Comments (0)

Your email address will not be published. Required fields are marked *

Back to top button