ರಾಜ್ಯಸುದ್ದಿ

ನಿವೇಶನಕ್ಕಾಗಿ ಡಿಸಿ ಮುಂದೆ ಮಹಿಳೆಯರ ಕಣ್ಣೀರು

ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದ ಮಹಿಳೆಯರು ನಿವೇಶನಕ್ಕಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಮುಂದೆ ಕಣ್ಣೀರು ಹಾಕಿದ್ದಾರೆ.ಕಳೆದ 15 ವರ್ಷದಿಂದ ಬಾಡಿಗೆ ಮನೆಯಲ್ಲಿ ಕೂಲಿ ಮಾಡಿಕೊಂಡು ವಾಸಿಸುತ್ತಿದ್ದೇವೆ. ಆದರೆ, ಮನೆಗಳು ಮಾತ್ರ ಉಳ್ಳವರ ಪಾಲಾಗುತ್ತಿದ್ದು ಸರಿಯಾದ ಕ್ರಮ ಅಲ್ಲ ಎಂದು ಜಿಲ್ಲಾಧಿಕಾರಿ ಮುಂದೆ ಅಳಲು ತೋಡಿಕೊಂಡರು.

 

ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಗಿದೆ.

Comments (0)

Your email address will not be published. Required fields are marked *

Back to top button