ಚಿತ್ರದುರ್ಗ: ಚುನಾವಣೆ ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್ ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಿರಿಯೂರಿನಲ್ಲಿ ಸಮುದಾಯ ಭವನ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಾನು ಕಾಂಗ್ರೆಸ್ಸಿಗನಾಗಿ ಈ ಮಾತನ್ನು ಹೇಳುತ್ತಿಲ್ಲ. ದೇಶದ ಪ್ರಜೆಯಾಗಿ ಹೇಳುತ್ತಿದ್ದೇನೆ. ನೀವೆಲ್ಲರೂ ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಪ್ರಶ್ನೆ ಮಾಡುವುದು ಕಲಿಯದಿದ್ದರೆ, ಮತ ಹಾಕಲು ಅರ್ಹರಲ್ಲ ಇನ್ನೇನೂ 15-20 ದಿನಗಳಲ್ಲಿ ಚುನಾವಣೆ ಆರಂಭ ಆಗಲಿದೆ.ಇದೀಗ ಅವರು ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ,