ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ.
ಬೈಕ್‌ನಲ್ಲಿ ಹೋಗುತ್ತಿದ್ದ ಶರಣಪ್ಪರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ, ನಂತರ ಅಲ್ಲಿದ್ದ ಮರಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡೋಣಿ ಗ್ರಾಮದಲ್ಲಿ ಶರಣಪ್ಪ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದ ಎನ್ನಲಾಗಿದೆ.
ಇನ್ನೂ ಕೊಲೆಯದ ಸ್ವರೂಪ ನೋಡಿ ಡೋಣಿ ಹಾಗೂ ಡಾಂಬಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಂಡರಗಿ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.