Freedom TV

ಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.

ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್‌ ರಾಜೇಂದ್ರ‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button