ರಾಜ್ಯಸುದ್ದಿ

ಬೆಂಗಳೂರಿನ ಅರಮನೆ ಮೈದಾನ ಸರ್ಕಾರದ ವಶಕ್ಕೆ..!?

 

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯನ್ನ ನೀಡಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ‘ಈ ಜಾಗ ಸಾರ್ವಜನಿಕರದ್ದು ಎಂದು ಕಾನೂನು ಮಾಡಲಾಗಿದೆ.
ಅದನ್ನು ಹೈಕೋರ್ಟ್ ಸಹ ಒಪ್ಪಿದೆ. ಅದರ ವಿರುದ್ಧ ರಾಜವಂಶಸ್ಥರು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದಾರೆ. ಯಥಾಸ್ಥಿತಿ ಕಾಪಾಡುವಂತೆಯೂ ಸುಪ್ರೀಂಕೋರ್ಟ್ ಸೂಚಿಸಿದೆ. ಸೂಕ್ತ ವಕೀಲರನ್ನು ನೇಮಕ ಮಾಡಿ ಸರ್ಕಾರದ ನಿಲುವಿಗೆ ಪೂರಕವಾಗಿ ಮೂಲ ಆಧಾರಗಳ ಪ್ರಕಾರ ಮುಂದುವರೆಯಬೇಕು ಎಂದು ಮುಖ್ಯಮಂತ್ರಿ ಸೂಚನೆಯನ್ನ ನೀಡಿದರು.

Comments (0)

Your email address will not be published. Required fields are marked *

Back to top button