ರಾಜಕೀಯರಾಜ್ಯಸುದ್ದಿ

ಸಂಸದೆ ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್​ ಯತ್ನ?

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಬಿಜೆಪಿ ಬೆಂಬಲಿತ ಹಾಲಿ ಸದಸ್ಯೆ ಸುಮಲತಾ ಅಂಬರೀಷ್ ಅವರ ಮನವೊಲಿಕೆ ಪ್ರಯತ್ನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ.ನಡ್ಡಾ ಅವರು ಸುಮಲತಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದು, ಸುಮಲತಾ ಅವರು ಭಾನುವಾರ ದೆಹಲಿಗೆ ತಲುಪಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ಬಿಜೆಪಿ ನಾಯಕರ ಆಹ್ವಾ ನದ ಮೇರೆಗೆ ದೆಹಲಿಗೆ ಆಗಮಿಸಿದ್ದಾರೆ.

ಸುಮಲತಾ ಅಂಬರೀಷ್ ಭಾನುವಾರ ಇಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸುಮಲತಾ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂಬ ವದಂತಿ ಹಬ್ಬಿದೆ. ‘ನಡ್ಡಾ ಅವರ ರಾಜಕೀಯ ಅಹ್ವಾನದಂತೆ ಪರಿಸ್ಥಿತಿ ಚರ್ಚಿಸಲು ಆಗಮಿಸಿದ್ದೇನೆ’ ಎಂದು ಸುಮಲತಾ ಸುದ್ದಿಗಾರರಿಗೆ ತಿಳಿಸಿದರು.

ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಕ್ಷೇತ್ರದ ಸಂಸದ, ಬಿಜೆಪಿಯ ಬಿ.ಎನ್. ಬಚ್ಚೇಗೌಡ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಮಾಜಿ ಸಚಿವ ಡಾ.ಕೆ.ಸುಧಾಕರ್, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರ ಅಲೋಕ್ ಸದ್ಯ ಬಿಜೆಪಿ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಸಿದ್ದಾರೆ. ಸುಮಲತಾ ಅವರು 2019ರಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದರು. ಪ್ರಸ್ತುತ, ಸೀಟು ಹಂಚಿಕೆ ಸೂತ್ರದಂತೆ  ಮಂಡ್ಯ ಕ್ಷೇತ್ರವು ಜೆಡಿಎಸ್‌ಗೆ ಹೋಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಕ್ಕಲಿಗ, ಬಲಿಜ ಸಮುದಾಯದ ಮತಗಳು ಹೆಚ್ಚಿವೆ. ಬಿಜೆಪಿ ಸುಮಲತಾ ಅವರನ್ನು ಕಣಕ್ಕಿಳಿಸಿದರೆ, ಅವರ ಪರ ಪ್ರಚಾರ ನಡೆಸಲು ಜೆಡಿಎಸ್‌ನ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗೂ ಕೋರುವ, ಅಂತೆಯೇ ಸುಮಲತಾ ಅವರಿಗೆ ಮಂಡ್ಯ ದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲು ಕೋರುವ ಸಾಧ್ಯತೆಗಳಿವೆ. ಬಚ್ಚೇಗೌಡ ರಾಜೀನಾಮೆ ಇಂದು  ಬಿ.ಎನ್.ಬಚ್ಚೇಗೌಡ ಸಂಸದ ರಾಷ್ಟ್ರ ಅವರು ಸೋಮವಾರ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ, ಚುನಾವಣಾ ರಾಜಕೀಯದಿಂದ ದೂರ ಇರುವೆ’ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button