Freedom TVಸಿನಿಮಾಸುದ್ದಿ

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ: ಏನಾಗಿದೆ..?

ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ. ಗಾಯಕಿ ಮಂಗ್ಳಿ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಭಾಗಿಯಾಗಿದ್ದರು.

ಅಲ್ಲಿಂದ ಹಿಂತಿರುವ ವೇಳೆ ಅವರ ಕಾರು ಅಪಘಾತವಾಗಿದೆ. ಶಂಶಾಬಾದ್ ತೊಂಡುಪಲ್ಲಿ ಬಳಿಕ ಟ್ರಕ್ ಒಂದು ಅವರ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಮಂಗ್ಲಿ, ಮೇಘರಾಜ್, ಮನೋಹರ್ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಟ್ರಕ್ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ.

ಅಷ್ಟಕ್ಕೂ ಗಾಯಕಿ ಮಂಗ್ಲಿ ಮನರಂಜನಾ ಕ್ಷೇತ್ರದಲ್ಲಿ ಸದಾ ಚಾಲ್ತಿಯಲ್ಲಿ ಇರುವ ಹೆಸರು. ತಮ್ಮ ಬ್ಯಾಕ್-ಟು-ಬ್ಯಾಕ್ ಹಿನ್ನೆಲೆ ಗಾಯನ, ಆಲ್ಬಮ್ಗಳು ಮತ್ತು ಹಲವಾರು ಕಾರ್ಯಕ್ರಮಗಳೊಂದಿಗೆ ತೆಲುಗು ಚಲನಚಿತ್ರದ ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದಲ್ಲಿ ಈಗಾಗಲೇ ಕೆಲವು ಹಾಡುಗಳನ್ನು ಹಾಡಿದ್ದಾರೆ.

Comments (0)

Your email address will not be published. Required fields are marked *

Back to top button