ರಾಜಕೀಯರಾಜ್ಯಸುದ್ದಿ

ಅಧಿಕಾರಿಗಳಿಗೆ ನೀನ್ಯಾವನೊ ಬೋ..ಮಗ ಎಂದು ಬೈದ ಗುಬ್ಬಿ ಶಾಸಕ

ತುಮಕೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಎಫ್‌ಐಆ‌ರ್ ದಾಖಲಾದ ಬೆನ್ನಲ್ಲೇ ಸರ್ಕಾರಿ ಅಧಿಕಾರಿಯನ್ನು ಶಾಸಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿದೆ. ಮಾ. 4ರಂದು ಗುಬ್ಬಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗುಬ್ಬಿ ಸಿಡಿಪಿಒ ಮಹೇಶ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕ ಎಸ್.ಆರ್.ಶ್ರೀನಿವಾಸ್, ನೀನ್ಯಾವನೋ ಬೋ…ಮಗ ಎಂದು ಬೈದಿರುವುದು ಕಂಡು ಬಂದಿದೆ. ಸಿಡಿಪಿಒ ಮಹೇಶ್ ವಿರುದ್ಧ ಮಹಿಳಾ ಪೂರಕ ಪೌಷ್ಠಿಕ ಆಹಾರ ತಯಾರಿಕಾ ಘಟಕದ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ್ದ ಶಾಸಕ, ಅಧಿಕಾರಿಯನ್ನು ತರಾಟೆ ತೆಗೆದುಕೊಂಡಿದ್ದರು.

Comments (0)

Your email address will not be published. Required fields are marked *

Back to top button