ಕ್ರೈಂ ಸ್ಟೋರಿರಾಜ್ಯಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ : ಆರೋಪಿ ಅರೆಸ್ಟ್

ರಾಮನಗರ : ಅಪ್ರಾಪ್ತ ಬಾಲಕಿಯ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಘಟನೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತಾ ಅಪ್ರಾಪ್ತೆಯನ್ನು ಹಾಸ್ಟೆಲ್ನಿಂದ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.


ಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ ಬಾರದ ಹಿನ್ನೆಲೆ ಹಾಸ್ಟಲ್ ಸಿಬ್ಬಂದಿ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ವ್ಯಕ್ತಿಯ ಹಾವಾಭಾವ ಕಂಡು ಹಾಸ್ಟೆಲ್ ಸಿಬ್ಬಂದಿಗೆ ಅನುಮಾನ ಬಂದಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಆರೋಪಿ ಅಪ್ರಾಪ್ತಳನ್ನು ಮಾವಿನ ತೋಪಿಗೆ ಕರೆದೊಯ್ದಿದ್ದ ಸ್ಥಳಕ್ಕೆ ಪೊಲೀಸರು ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

Comments (0)

Your email address will not be published. Required fields are marked *

Back to top button