ರಾಜಕೀಯರಾಜ್ಯಸುದ್ದಿ

ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ: ಕೆ.ಎಸ್.ಈಶ್ಪರಪ್ಪ ಬಾಂಬ್

ಟಿಕೆಟ್​ ಕೈತಪ್ಪಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ದ ಬಂಡೆದ್ದಿರುವ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗ್ತಾರೆ ಅಂತಾ ರಾಜ್ಯದಲ್ಲಿ ಪ್ರಯತ್ನ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ ಎಂದಿದ್ದಾರೆ. ಇದೇ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವುದು ಶತಸಿದ್ದ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ ಜೊತೆಗೆ ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ. ನೂರಕ್ಕೆ ನೂರು ನೀವು ಗೆಲ್ಲುತ್ತೀರಿ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ, ಸರ್ವಾಧಿಕಾರಿ ಧೋರಣೆ ಇದೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಾನು ಸ್ಪರ್ಧೆ ಮಾಡಿದ್ದರೆ ನೂರಕ್ಕೆ ನೂರು ಗೆಲ್ಲುತ್ತಿದ್ದೆ. ಬಿಜೆಪಿ 27 ಕ್ಷೇತ್ರದಲ್ಲಿ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಕುಟುಂಬದ ವಿರುದ್ದ ಸ್ಪರ್ಧೆ ಮಾಡಿದ್ದೇನೆ. ಶಿವಮೊಗ್ಗದಲ್ಲಿ ನಾನು ಗೆಲ್ಲುತ್ತೇನೆ. ಗೆದ್ದ ನಂತರ ಬಿಜೆಪಿಗೆ ಮತ್ತೆ ಸೇರುತ್ತೇನೆ ಎಂದು ಈಶ್ವರಪ್ಪ ಗುಡುಗಿದ್ದಾರೆ.

Comments (0)

Your email address will not be published. Required fields are marked *

Back to top button