Thursday, August 21, 2025
26.4 C
Bengaluru
Google search engine
LIVE
ಮನೆಸಿನಿಮಾಸದ್ದಿಲ್ಲದೇ ಸೆಟ್ಟೇರಿತು ‘ಅಣ್ಣ From Mexico’….

ಸದ್ದಿಲ್ಲದೇ ಸೆಟ್ಟೇರಿತು ‘ಅಣ್ಣ From Mexico’….

ಬಂಡೆ ಮಹಾಕಾಳಿ ಆಶೀರ್ವಾದದೊಂದಿಗೆ ಶುರು ‘ಬಡವ ರಾಸ್ಕಲ್’ ತಂಡದ ಮತ್ತೊಂದು ಪ್ರಯತ್ನ..

ಬಡವ ರಾಸ್ಕಲ್ ಬಳಗ ಮತ್ತೆ ಒಂದಾಗಿರುವುದು ಗೊತ್ತೇ ಇದೆ. ನಟರಾಕ್ಷಸ ಡಾಲಿ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico ಚಿತ್ರತಂಡವೀಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ ಇಡಲು ತಯಾರಾಗಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಧನು ಹಾಗೂ ಶಂಕರ್ ಗುರು ಜೋಡಿಯ ಅಣ್ಣ From Mexico ಸಿನಿಮಾದ ಮುಹೂರ್ತ ನೆರವೇರಿದೆ. ರಾಯಲ ಸ್ಟುಡಿಯೋಸ್ ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ …
’ಅಣ್ಣ From Mexico’ ಗೆ ಸಿಂಪಲ್ ಮುಹೂರ್ತ. ಡಾಲಿ ಧನಂಜಯ ಅಭಿನಯದ,ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕಾ ಆಕ್ಷನ್ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ದಿ ರಾಯಲ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ, ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ. ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದು. ಜನವರಿ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments