Friday, August 22, 2025
24.2 C
Bengaluru
Google search engine
LIVE
ಮನೆ#Exclusive NewsBBMP | ಕೆರೆ ಒತ್ತುವರಿದಾರರಿಗೆ ಬಿಬಿಎಂಪಿಯಿಂದ ಬಿಗ್​ ಶಾಕ್​​.!

BBMP | ಕೆರೆ ಒತ್ತುವರಿದಾರರಿಗೆ ಬಿಬಿಎಂಪಿಯಿಂದ ಬಿಗ್​ ಶಾಕ್​​.!

ಬೆಂಗಳೂರು :

ಬಿಬಿಎಂಪಿ ವ್ಯಾಪ್ತಿಯ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯ ಶೀಘ್ರ..!


ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗೆ ಸೂಚನೆ ನೀಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿ ಮಾಡಿರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಯಿತು.


ಕೆರೆ ಹಾಗೂ ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲು ಕಂದಾಯ ಇಲಾಖೆಗೆ ಸೂಚನೆ:


ಒತ್ತುವರಿಗಳನ್ನು ಗುರುತಿಸಿದ ನಂತರ ತಹಶೀಲ್ದಾರ್ ಗಳು ಒತ್ತುವರಿದಾರರಿಗೆ ಆದೇಶಗಳನ್ನು ನೀಡಿದ ಬಳಿಕ ಪಾಲಿಕೆ ಹಾಗೂ ಕಂದಾಯ ಇಲಾಖೆಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಿದೆ.


75 ಒತ್ತುವರಿಗಳನ್ನು ತೆರವುಗೊಳಿಸಿರುವ ವಿವರ :


ನಗರದಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಮಹದೇವಪುರ ವ್ಯಾಪ್ತಿಯಲ್ಲಿ ಬರುವ ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್ ಪುರದ ಸರ್ವೇ ಸಂಖ್ಯೆ 69ರಲ್ಲಿ ಬರುವ 3 ಅಂತಸ್ತಿನ ಕಟ್ಟಡದಲ್ಲಿ ಬರುವ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನು ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ಸೇರಿದಂತೆ ಒತ್ತು 75 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.


ಬೃಹತ್ ನೀರುಗಾಲುವೆ ಒತ್ತುವರಿಗಳ ವಿವರ:


ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3176 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2322 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. ಇನ್ನು 854 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದ್ದು, ಈ ಪೈಕಿ 155 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿರುತ್ತದೆ. 487 ಒತ್ತುವರಿಗಳಿಗೆ ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 162 ಒತ್ತುವರಿಗಳಿಗೆ ತಹಶಿಲ್ದಾರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.



ಕೆರೆಗಳ ಒತ್ತುವರಿಗಳ ಸರ್ವೇ ಕಾರ್ಯ ತ್ವರಿತವಾಗಿ ನಡೆಸಿ:


ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಲಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೇ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳಲ್ಲಿ ಸರ್ವೇಕಾರ್ಯವನ್ನು ತ್ವರಿತವಾಗಿ ನಡೆಸಲು ಸೂಚನೆ ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments