ರಾಜಕೀಯರಾಜ್ಯಸುದ್ದಿ

ರಾಜೀನಾಮೆಗೆ ಕುಟುಂಬ ರಾಜಕೀಯವೇ ಕಾರಣ : ಮರಿತಿಬ್ಬೇಗೌಡ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ‌ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡರವರು ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆಯನ್ನು ಲಿಖಿತ ಮೂಲಕ ನೀಡಿದರು.

ಹುಬ್ಬಳ್ಳಿಯ ಸಭಾಪತಿ ಬಸವರಾಜ್ ಹೊರಟ್ಟಿಯವರ ಗೃಹ ಕಚೇರಿಗೆ ಆಗಮಿಸಿದ ಜೆಡಿಎಸ್ ಪರಿಷತ್ ಸದಸ್ಯ ಮರಿತಿಬ್ಬೇಗೌಡರವರು ಸಭಾಪತಿಗಳಿಗೆ ರಾಜೀನಾಮೆ ಪತ್ರವನ್ನು ನೀಡಿದ್ದರು. ಇನ್ನೂ ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿ, ಮರಿತಿಬ್ಬೇಗೌಡ ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನೂ ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button