Freedom TV

ಬಾಲಕಿ ದತ್ತು ವಿಚಾರ : ಸೋನು ಶ್ರೀನಿವಾಸಗೌಡ ಅರೆಸ್ಟ್

ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್​ ಬಸ್​ ಮಾಜಿ ಸ್ಫರ್ಧಿ, ಟಿಕ್​ ಟಾಕ್​ ಸ್ಟಾರ್​​ ಸೋನುಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಗೌಡರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್​​ ಜಂಟಿ ಕಾರ್ಯಚರಣೆ ವೇಳೆ ಬಂಧಿಸಲಾಗಿದೆ. ಜೆಜೆ ಕಾಯ್ದೆ ಅಡಿಯಲ್ಲಿ ಸೋನು ಗೌಡ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button