ಉತ್ತರ ಪ್ರದೇಶ : ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗ ಮಾತ್ರವೇ ಜನರಿಗೆ ಸಂಸತವಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಪಂಚರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಒಗ್ಗಟ್ಟು ಬಲಗೊಂಡಿದೆ ಎಂದು ಅವರು ಹೇಳಿದರು. ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶದಲ್ಲಿ ಬಿಜೆಪಿ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಮಿಜೋರಾಂ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಝೋರಂ ಪೀಪಲ್ಸ್ ಮೂವ್ಮೆಂಟ್ ಬಹುಮತ ಪಡೆದು ಸರ್ಕಾರ ರಚಿಸಿದೆ.
ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಂದಾಗುವಂತೆ ಎಲ್ಲಾ ಪಕ್ಷಗಳನ್ನು ಕೇಳುತ್ತೇನೆ. ಉತ್ತರ ಪ್ರದೇಶದ ಎಲ್ಲಾ 80 ಕ್ಷೇತ್ರಗಳಲ್ಲಿಯೂ ಬಿಜೆಪಿಯನ್ನು ಸೋಲಿಸಲು ಪ್ರಯತ್ನಿಸಲಾಗುವುದು. ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕಿದಾಗಲೇ ಜನರು ಸಂಸತಪಡುವುದು ಎಂದು ಹೇಳಿದ್ದಾರೆ.