ರಾಜಕೀಯಸುದ್ದಿ

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್​. ಅಶೋಕ್​

ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್​ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ.

ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್‌ ಪವಾ‌ರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ.

ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು. ಸಿದ್ದರಾಮಯ್ಯ ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು ತಮ್ಮ ನಾಯಕನ ಈ ನಡೆಗೆ ಏನು ಹೇಳುತ್ತಾರೆ?

Comments (0)

Your email address will not be published. Required fields are marked *

Back to top button