ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದೆ.
ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರು- ರಾಜಾ ಅಮರೇಶ್ವರ ನಾಯಕ್, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ, ಚಿತ್ರದುರ್ಗದಿಂದ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಿದೆ.