ರಾಜ್ಯಸುದ್ದಿ

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ದಾವಣಗೆರೆ : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದ್ದು, ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೌದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಅಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಸುಮಾರು ಎರಡು ಸಾವಿರ ಜನ ಸಂಖ್ಯೆ ಇದೆ. ಇಷ್ಟು ಜನಕ್ಕೆ ಇರೋದು ಕೇವಲ ಒಂದೇ ಒಂದು ಬೋರು. ಅದ್ರಲ್ಲೆ ಜಾನುವಾರುಗಳಿಗೂ ನೀರು ಕುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಆದ್ರೆ ಇತ್ತಿಚೆಗೆ ಬೋರ್ ಕೈ ಕೊಟ್ಟಿದೆ ಹೀಗಾಗಿ ಜನರು ಕುಡಿಯುವ ನೀರಿಗೆ ಪರಿತಪಿಸುವತಾಂಗಿದೆ. ಹೀಗಾಗಿ ರೊಚ್ಚಿಗೆದ್ದು ಪಂಚಾಯ್ತಿಗೆ ಮುತ್ತಿಗೆ ಹಾಕಿ, ಪಂಚಾಯ್ತಿ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು.

ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಒಂದು ತಿಂಗಳಾದರು ದುರಸ್ಥಿ ಮಾಡಿಲ್ಲ ನಾಳೆಯ ಒಳಗಡೆ ಶುದ್ದ ಕುಡಿಯುವ ನೀರಿನ ಘಟಕ ದುರಸ್ಥಿ ಮಾಡದೆ ಹೋದರೆ ನಾಳೆ ತಾಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

Comments (0)

Your email address will not be published. Required fields are marked *

Back to top button