ಆರೋಗ್ಯರಾಜ್ಯಸುದ್ದಿ

ಮಂಗನ ಕಾಯಿಲೆಗೆ ವೃದ್ದರೇ ಟಾರ್ಗೆಟ್​!

ಚಿಕ್ಕಮಗಳೂರು : ಮಂಗನ ಕಾಯಿಲೆಗೆ ವೃದ್ಧರೇ ಹೆಚ್ಚಾಗಿ ಟಾರ್ಗೆಟ್ ಆಗುತ್ತಿದ್ದು, ಚಿಕ್ಕಮಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ವೃದ್ಧೆಯೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವವರು ಮೃತಪಟ್ಟಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಇರುವುದು ದೃಢವಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚುತ್ತಿದೆ. ಕೊಪ್ಪ, ಎನ್‌ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಕಾಯಿಲೆ ಹೆಚ್ಚುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ11 ಕೆಎಫ್‌ಡಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Comments (0)

Your email address will not be published. Required fields are marked *

Back to top button