
ಹುಬ್ಬಳ್ಳಿ : ಹುಬ್ಬಳ್ಳಿಯ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶೆಟ್ಟರ್ ನಿವಾಸದಲ್ಲಿ ಸಿಎಂಗೆ ಭರ್ಜರಿಯಾಗಿ ಸ್ವಾಗತಿಸಲಾಯಿತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ 68ನೇ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದರು.

ಶೆಟ್ಟರ್ ಕುಟುಂಬದೊಂದಿಗೆ ಸಿಎಂ ಉಪಹಾರ ಸೇವಿಸಿದರು. ಶೆಟ್ಟರ್ ಹುಟ್ಟುಹಬ್ಬದ ನಿಮಿತ್ತ ಶೆಟ್ಟರ್ ನಿವಾಸದ ಎದುರು ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಶೆಟ್ಟರ್ ಬಳಿ ಶಾಲು, ಹಾರ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ಶೋಕಾಚರಣೆ ಇದೆ ಶೆಟ್ಟರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.




