ಕ್ರೈಂ ಸ್ಟೋರಿಸುದ್ದಿ

ರಾಮೇಶ್ವರಂ ಕೆಫೆ ಬ್ಲಾಸ್ಟ್​ : ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ ಎನ್​ಐಎ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ  ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫೆ​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎಂಬಾತನನ್ನು ನಿನ್ನೆ (ಮಾರ್ಚ್ 29) ಅಧಿಕಾರಿಗಳು ಬಂಧಿಸಿದ್ದಾರೆ.

ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಎನ್​ಐಎ ಬಲೆ ಬೀಸಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ.

Comments (0)

Your email address will not be published. Required fields are marked *

Back to top button