Freedom TV

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್​ಗಳಿಗೆ ‘ಐಟಿ’ ಶಾಕ್ : 20 ಕ್ಕೂ ಹೆಚ್ಚು ಕಡೆ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಬಿಲ್ಡರ್​ಗಳಿಗೆ ಐಟಿ ಇಲಾಖೆ ಅಧಿಕಾರಿಗಳು ಶಾಕ್​ ನೀಡಿದ್ದು, ಹಲವು ಬಿಲ್ಡರ್​ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 20ಕ್ಕೂ ಹೆಚ್ಚು ಕಡೆ ದಾಳಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನ ಕೆ.ಆರ್ .ಪುರಂ, ಕೊಡಿಗೇಹಳ್ಳಿ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಸದ್ಯ ಕಡತಗಳ‌ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ತೊಡಗಿದ್ದಾರೆ. ಬಿಲ್ಡರ್​ಗಳು ತೆರಿಗೆ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

 

Comments (0)

Your email address will not be published. Required fields are marked *

Back to top button