ಕೋಲಾರ : ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ ಬಳಿ ಸಭೆ ನಡೆಸಿ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚೆ ಮಾಡಲಾಗಿದೆ.
ಸಭೆಯಲ್ಲಿ ಶಾಸಕ ವೆಂಕಟಾಶಿವರೆಡ್ಡಿ, ಮಾಜಿ ಶಾಸಕ ಜೆ ಕೆ ಕೃಷ್ಣಾರೆಡ್ಡಿ ,ಎಮ್ ಆರ್ ಶ್ರೀನಾಥ್ ಸಭೆಯಲ್ಲಿ ಬಾಗಿಯಾಗಿದ್ದರು. ಅಧಿಕೃತವಾಗಿ ಮೈತ್ರಿ ಅಬ್ಯರ್ಥಿಯಾಗಿ ಘೋಷಣೆ ಬಳಿಕ ಮಲ್ಲೇಶ್ ಬಾಬು ರಿಂದ ಚುನಾವಣಾ ತಂತ್ರಗಾರಿಕೆ ಶುರುಮಾಡಿದ್ದು , ಮುಖಂಡ ರೊಂದಿಗೆ ಪ್ರಾಥಮಿಕ ಸಭೆ ನಡೆಸಿದ್ದು ನಾಳೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಸಮನ್ವಯ ಸಭೆ ಏರ್ಪಡಿಸಲಾಗಿದ್ದು ಅಲ್ಲಿ ಚರ್ಚೆ ಮಾಡಬೇಕಾದ ವಿಷಯಗಳ ಕುರಿತು ಮುಖಂಡರ ಬಳಿ ಸಲಹೆ ಪಡೆದು ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಎರಡು ಬಾರಿ ವಿಧಾಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪರಾಭಾವಗೊಂಡಿದ್ದೇನೆ ಎಂದು ಹೇಳಿದರು.
ಸಮನ್ವಯ ಸಭೆ ಹಮ್ಮಿಕೊಂಡು ಚರ್ಚೆ ಬಳಿಕ ಚುನಾವಣಾ ಪ್ರಚಾರ ಪ್ರಾರಂಭಿಸ್ತೇವೆ ಬಿಜೆಪಿ ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸ್ತೇವೆ, ಕೇಂದ್ರದ ಬಿಜೆಪಿ ಸರ್ಕಾರದ ಅಭಿವೃದ್ದಿ ಕಾರ್ಯಗಳೇ ನಮಗೆ ಶ್ರೀರಕ್ಷೆ, ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದ್ದು ಎನ್.ಡಿ.ಎ ಅಭ್ಯರ್ಥಿ ಈ ಬಾರಿ ಕೋಲಾರದಲ್ಲಿ ಗೆಲ್ಲುತ್ತೇವೆ ಅನ್ನೋ ವಿಶ್ವಾಸವಿದೆ , ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲು ಸಿದ್ದತೆ ನಡೆಸಿಕೊಳ್ಳುತ್ತಿದ್ದೇವೆ ನಾಮಪತ್ರ ಸಲ್ಲಿಕೆ ವೇಳೆ ನಿಖೀಲ್ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.