ರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ – ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಯನ್ನ ನೀಡಿದ್ದಾರೆ.

ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು ಒಪ್ಪಿಕೊಳ್ಳುವುದಿಲ್ಲ. ಇವರ ಅರವತ್ತು ವರ್ಷದ ಸರ್ಕಾರದ ರೂಪುರೇಷೆಗಳನ್ನು ನೋಡಿದರೇ ನಿಜಕ್ಕೂ ನಮಗೆ ಒಂಥರ ನಗುಬರುತ್ತದೆ. ಕೋಟ್ಯಾಂತರ ರೂ ಹಣವನ್ನು ಲೂಟಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಕೊಡದೇ ಏನ ಮಾಡುತ್ತಾರೆ ಎಂದರು.

2016 ಹಾಗೂ 2019ರಲ್ಲಿ ದೊಡ್ಡ ಮಟ್ಟದ ಕ್ಯಾಶ್ ತೆಗೆದುಕೊಂಡಿದ್ದಾರೆ. ಹೀಗಾಗಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಿದ್ದು, ಕಾನೂನು ಪ್ರಕಾರ ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಐಟಿ ನೋಟಿಸ್ ಕೊಟ್ಟು ತನಿಖೆಗೆ ಮುಂದಾಗಿದ್ದರೇ ಇದನ್ನು ಕಾಂಗ್ರೆಸ್ ಪಕ್ಷ ರಾಜಕೀಯ ದುರುದ್ದೇಶ ಎಂದು ಟೀಕೆ ಮಾಡುತ್ತಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿ ಎಂದು ಹೇಳಿದರು.

ಅರವತ್ತು ವರ್ಷಗಳ ರಾಜಕೀಯ ಅನುಭವದಲ್ಲಿ ಏನು ಮಾಡಿದ್ದಾರೆ. ತಮ್ಮ ತಪ್ಪನ್ನು ಒಪ್ಪಿಕೊಳ್ಳದ ಮನಸ್ಥಿತಿಗೆ ಕಾಂಗ್ರೆಸ್ ಬಂದು ತಲುಪಿದೆ. ಇನ್ನೂ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ವಿಚಾರ, ಯಾವುದಕ್ಕೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಜೋಶಿ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button