
ಗದಗ : ಲೋಕಸಭೆ ಚುನಾವಣೆ ಹಿನ್ನಲೆ ಗದಗ ಜಿಲ್ಲೆ ಹಮ್ಮಿಗಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ಆರಂಭಿಸಿದ್ದಾರೆ.

ಗ್ರಾಮೀಣ ಭಾಗದ ಮತ ಬೇಟೆಯನ್ನ ಬಸವರಾಜ ಬೊಮ್ಮಾಯಿ ಆರಂಭಿಸಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ನಲ್ಲಿ ಮಹಿಳಾ ಕಾರ್ಯಕರ್ತೆಯರು ಡ್ಯಾನ್ಸ್ ಮಾಡಿದ್ದಾರೆ. ಅದರಲ್ಲೂ ಮಹಿಳೆಯರು ಲಂಬಾಣಿ ನೃತ್ಯವನ್ನೂ ಸಹ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬೊಮ್ಮಾಯಿಗೆ ಮಾಜಿ ಸಚಿವ ಸಿಸಿ ಪಾಟೀಲ್ , ಶಾಸಕ ಡಾ. ಚಂದ್ರು ಲಮಾಣಿ ಸಾಥ್ ನೀಡಿದ್ದಾರೆ.




