ಚಾಮರಾಜನಗರ : ಬಟ್ಟೆ ಒಗೆಯಲು ಹೋಗಿ ತಾಯಿ ಸೇರಿ ಇಬ್ಬರು ಮಕ್ಕಳು ನಿರುಪಾಲಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಿಸಲು ಹೋಗಿ ಇಬ್ಬರು ಮಕ್ಕಳು ನೀರುಪಾಲಅಗಿದ್ದಾರೆ. ಪುದೂರು ಗ್ರಾಮದ ಮೀನಾ(33) ಪವಿತ್ರ(13) ಕೀರ್ತಿ(12) ಮೃತ ದುರ್ದೈವಿಗಳಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.