ಬೆಂಗಳೂರು : ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಪ್ರತಿಕ್ರಿಯಿಸಿದ ಬಸವರಾಜು ಬೊಮ್ಮಾಯಿ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ ಹೈಕಮಾಂಡ್ ಗೆ ಎಲ್ಲವೂ ಗೊತ್ತಿದೆ. ಅವರು ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಅವರನ್ನು ಕರೆದು ಮಾತನಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಷಯಕ್ಕೂ ಹೈಕಮಾಂಡ್ ಮಾತನಾಡುತ್ತದೆ ಎಂದರು. ಮಾಜಿ ಸಚಿವ ಗೂಳುಹಟ್ಟಿ ಶೇಖರ್ ಅವರ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆ ತಪ್ಪು ಕಲ್ಪನೆಯಿಂದ ಕೂಡಿದೆ. ಸಂಘದಲ್ಲಿ ದಲಿತ ಸಮುದಾಯವರೂ ಎತ್ತರ ಮಟ್ಟದಲ್ಲಿದ್ದಾರೆ ಎಂದು ಹೇಳಿದರು.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅಧಿವೇಶನದಲ್ಲಿ ಪಾಲ್ಗೊಳ್ಳದೆ ತೆಲಂಗಾಣ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ರಾಜ್ಯದ ಜನರ ಸಮಸ್ಯೆ ಮುಖ್ಯನೊ ರಾಜಕೀಯ ಮುಖ್ಯನೋ ಎನ್ನುವುದನ್ನು ಅವರೇ ಹೇಳಬೇಕು ಎಂದು ಆಗ್ರಹಿಸಿದರು.

ಅರ್ಜುನ ಸಾವಿನ ತನಿಖೆಯಾಗಲಿ

ನಾಡಹಬ್ಬ ವಿಶ್ವವಿಖ್ಯಾತ ದಸರಾದಲ್ಲಿ ಅಂಬಾರಿ ಹೊತ್ತ ಆನೆ ಅರ್ಜುನ ಸಾವಿನ ಕುರಿತು ಮಾತನಾಡಿದ ಅವರು, ಆನೆ ಅರ್ಜುನ ಸಾವಿನ ಬಗ್ಗೆ ಸರ್ಕಾರ ಸತ್ಯ ಮುಚ್ಚಿಡುವ ಕೆಲಸ ಮಾಡುತ್ತಿದೆ. ಅದೇ ಕಾರಣಕ್ಕೆ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.  ಅರಣ್ಯ ಇಲಾಖೆಯಲ್ಲಿ ಅರಾಜಕತೆ ನಡೆಯುತ್ತಿದೆ. ಐಎಫ್ಎಸ್ ಅಧಿಕಾರಿಗಳ ಹಿಂಡು ಬೆಂಗಳೂರಿನಲ್ಲಿ ಆನೆ ಹಿಂಡಿನಂತಿದ್ದಾರೆ. ಅವರನ್ನು ನಾನು ಕಾಡಿಗೆ ಕಳುಹಿಸುವ ಕೆಲಸ ಮಾಡಿದ್ದೆ, ಈಗ ಮತ್ತೆ ವಾಪಸ್ ಬರುವ‌ ಕೆಲಸ ಮಾಡುತ್ತಿದ್ದಾರೆ. ಐಎಫ್ಎಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಅವರಿಗೆ ಅರಣ್ಯದ ಜವಾಬ್ದಾರಿ ನೀಡಿ ಕಾಡಿಗೆ ಕಳುಹಿಸಬೇಕು. ಆನೆ ಅರ್ಜುನ ಹಾಗೂ ಬೆಂಗಳೂರಿನ ಚೀತಾ ಸಾವಿನ ಪ್ರಕರಣದಲ್ಲಿ ಸರಿಯಾದ ತರಬೇತಿ‌ ಇಲ್ಲದೆ ಕಾರಣವಾಗಿದೆ ಎಂದು ಬಸವರಾಜು ಬೊಮ್ಮಾಯಿ ಹೇಳಿದರು.

By admin

Leave a Reply

Your email address will not be published. Required fields are marked *

Verified by MonsterInsights