ಮೈಸೂರು : ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ರೂಪಾಂತರಿ ವೈರಸ್‌ ಸೋಂಕಿನ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದ ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಿದೆ.

ಕೇರಳ ಕರ್ನಾಟಕ ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಹೆಚ್​ಡಿ ಕೋಟೆ ತಾಲೂಕಿನ ಆರೋಗ್ಯಧಿಕಾರಿ ಡಾ. ರವಿಕುಮಾರ್​ ನೇತೃತ್ವದಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿದೆ. ಕರ್ನಾಟಕ ಕೇರಳ ಗಡಿಯಲ್ಲಿ ಕರಪತ್ರ ಹಂಚಿ ಅರಿವು ಮೂಡಿಸಲಾಗುತ್ತಿದೆ. ಕೇರಳಕ್ಕೆ ಹೋಗಿ ಬಂದವರಲ್ಲಿ ಕೋವಿಡ್​​ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗೆ ಹೋಗಿ ಕೋವಿಡ್​ ಪರೀಕ್ಷೆ ಮಾಡಿಸುವಂತೆ ಸೂಚಿಸಲಾಗಿದೆ. ಕೋವಿಡ್​​ ಸೋಂಕಿತರ ಮೇಲೆ ನಿಗಾ ವಹಿಸಲು ಎರಡು ತಂಡಗಳ ರಚನೆ ಮಾಡಿದ್ದು, ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

By admin

Leave a Reply

Your email address will not be published. Required fields are marked *

Verified by MonsterInsights