ರಾಜಕೀಯಸುದ್ದಿ

4,650 ಕೋಟಿ ರೂ. ಮೌಲ್ಯದ ನಗ-ನಾಣ್ಯ-ವಸ್ತು ವಶಕ್ಕೆ

ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ಈ ಬಾರಿ ವಶಪಡಿಸಿಕೊಳ್ಳಲಾಗಿದೆ. ಎಂದು ಚುನಾವಣಾ ಆಯೋಗ ತಿಳಿಸಿದೆ.

18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇದೇ ಶುಕ್ರವಾರ ಆರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ದೇಶಾದ್ಯಂತ ಇದುವರೆಗೆ 4,650 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗ-ನಾಣ್ಯ ದಾಖಲೆರಹಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮೊತ್ತವು 2019 ರ ಲೋಕಸಭಾ ಚುನಾವಣೆಯ ಇಡೀ ಪ್ರಕ್ರಿಯೆಯಲ್ಲಿ ವಶಪಡಿಸಿಕೊಳ್ಳಲಾದ ಮೊತ್ತಕ್ಕಿಂತ 3,475 ಕೋಟಿ ರೂಪಾಯಿ ಹೆಚ್ಚಾಗಿದೆ.

Comments (0)

Your email address will not be published. Required fields are marked *

Back to top button