Freedom TV

ಪ್ರಿಯಂಕಾ ಜಾರಕಿಹೊಳಿ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲು ಕಾರಣ ಇದೇ ನೋಡಿ..!!

ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ ಎಂದರು.

ಸುಡು ಬಿಸಿಲಿನಲ್ಲಿ ಕಾರ್ಯಕರ್ತರು ಹಾಗೂ ಬೃಹತ್ ರ್ಯಾಲಿಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ತಂದೆ, ಲೋಕೋಪಯೋಗಿ ಇಲಾಖೆ ಸಚಿವ ಸತಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಆದ್ದರಿಂದ ತಂದೆಯವರ ಮಾರ್ಗದರ್ಶನದಂತೆ ಸರಳವಾಗಿ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

 

Comments (0)

Your email address will not be published. Required fields are marked *

Back to top button