Freedom TV

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು – ಅಷ್ಟಕ್ಕೂ ನಡೆದಿದ್ದೇನು..?

ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ  ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು‌ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ  ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಿಂದಿದ್ದರು ತಾಯಿ ಮತ್ತುಮಕ್ಕಳು,ಅಸ್ವಸ್ಥ ರಾಗಿದ್ದರು, ಮಕ್ಕಳು ಮನೆಯಲ್ಲಿ ಸಾವನ್ನಪ್ಪಿದ್ದು, ತಾಯಿ ತೀವ್ರಾಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಕ್ಕಳ ಮೃತ ದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ತಾಯಿಗೆ ಚಿಕಿತ್ಸೆ‌ ನೀಡಲಾಗುತ್ತಿದೆ. ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು,  ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Comments (0)

Your email address will not be published. Required fields are marked *

Back to top button