ಶಿಕ್ಷಣಸುದ್ದಿ

ಇಂದು, ನಾಳೆ ಸಿಇಟಿ ಬರಿಯುವ ವಿದ್ಯಾರ್ಥಿಗಳು ನೋಡಲೇ ಬೇಕಾದ ಸ್ಟೋರಿ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024(ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ. ಈ ಬಾರಿ 3,49,637 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಆದರೆ, ಪ್ರತೀ ವರ್ಷ ಸಿಇಟಿಗೆ ಸ್ಪಷ್ಟವಾದ ವಸ್ತ್ರಸಂಹಿತೆ(ಡ್ರೆಸ್‌ಕೋಡ್) ಪ್ರಕಟಿಸುತ್ತಿದ್ದ ಪ್ರಾಧಿಕಾರ ಈ ಭಾರಿ ಈ ಕುರಿತು ಯಾವುದೇ ನಿಖರ ಮಾಹಿತಿ ನೀಡಿಲ್ಲ.

ಇನ್ನು ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಆದರೆ. ಪ್ರಶ್ನೆಗೆ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ಹೇಳಿದೆ.

ಯಾವ ದಿನ ಯಾವ ಪರೀಕ್ಷೆ?

ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆ, ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಅಭ್ಯರ್ಥಿಗಳು ಪರೀಕ್ಷೆ ನಡೆಯುವ ಅರ್ಧ ಗಂಟೆ ಮುಂಚಿತವಾಗಿಯೇ ಹಾಜರಿರಬೇಕು.

ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆ ಪತ್ರಿಕೆ ಇರಲಿದೆ. ಗೊಂದಲ ಉಂಟಾದಲ್ಲಿ ಇಂಗ್ಲಿಷ್‌ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರವಾಗಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ.

ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಬೇಸಿಗೆಯ ಕಾರಣ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳನ್ನು ಕೊಡಲಾಗುತ್ತದೆ. ನಕಲು ಮಾಡಲು ಅವಕಾಶ ಆಗದಂತೆ ತಯಾರಿ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ.

ಏ.20ರಂದು ಹೊರನಾಡು ಕನ್ನಡಿಗರಿಗೆ ಪರೀಕ್ಷೆ ನಡೆಯಲಿದೆ. ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಬಾರಿ 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ.

 

 

 

Comments (0)

Your email address will not be published. Required fields are marked *

Back to top button