ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ವರ್ಷಗಳಿಂದ ಈ ದಂಪತಿ ಮೇಲೆ ಕಣ್ಣಿಟ್ಟಿದ್ದ ಇ.ಡಿ ಇದೀಗ ಇಬ್ಬರಿಗೂ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ಉದ್ಯಮಿ ರಾಜ್ ಕುಂದ್ರಾ ಅವರ ಪತ್ನಿ ಶಿಲ್ಪಾ ಶೆಟ್ಟಿ ಅವರ ಜುಹು ಫ್ಲಾಟ್ ಸೇರಿದಂತೆ ಸುಮಾರು 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದ್ದು, 2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.