ಚಿಕ್ಕಬಳ್ಳಾಪುರ: ಇಂದು ಬೆಂಗಳೂರಿಗೆ ಎಂಟ್ರಿಕೊಡಲಿರೋ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರದಲ್ಲೂ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಲ್ಲಿ ಸಮಾವೇಶ ಮಾಡೋದಕ್ಕೂ ಮೊದಲು ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 3ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಸೇರಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಭಾಗಿಯಾಗಲಿದ್ದಾರೆ.
ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಕೆ.ಸುಧಾಕರ್, ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಪ್ರಚಾರ ನಡೆಸಲಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಡಾ.ಕೆ.ಸುಧಾಕರ್‌ಗೆ ಮೋದಿ ಪ್ರಚಾರದಿಂದ ಪ್ಲಸ್ ಆಗೋ ಸಾಧ್ಯತೆ ಇದೆ. ದೇವೇಗೌಡ ಮತ್ತು ಕುಮಾರಸ್ವಾಮಿ ಆಗಮನದಿಂದಾಗಿ ಒಕ್ಕಲಿಗ ಮತಗಳು ಕ್ರೋಡೀಕರಣ ಆಗುವ ಲೆಕ್ಕಾಚಾರವೂ ಶುರುವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ಬೆಂಗಳೂರಿಗೆ ಬರ್ತಿದ್ದಾರೆ. ಬೆಂಗಳೂರಿನ 4 ಲೋಕಸಭಾ ಕ್ಷೇತ್ರಗಳಿಗೆ ಸೀಮಿತವಾಗಿ ಇಂದು ಪಿಎಂ ಮೋದಿ ಸಮಾವೇಶ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಪ್ಯಾಲೇಸ್‌ಗ್ರೌಂಡ್‌ನಲ್ಲಿ ಸಮಾವೇಶ ನಡೆಯಲಿದೆ. ಬೆಂಗಳೂರಲ್ಲಿ 3 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದರೂ ಈ ಬಾರಿ ಅಭ್ಯರ್ಥಿಗಳಿಗೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಪ್ರಧಾನಿ ಮೋದಿ ಈ ಭಾಗದಲ್ಲಿ ಮತಬೇಟೆಯಾಡಲಿದ್ದಾರೆ. ಶೋಭಾ ಕರಂದ್ಲಾಜೆ , ಪಿಸಿ ಮೋಹನ್, ತೇಜಸ್ವಿ ಸೂರ್ಯ , ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಡಾ.ಮಂಜುನಾಥ್ ಪರ ಮೋದಿ ಪ್ರಚಾರ ಮಾಡಲಿದ್ದಾರೆ.