Freedom TV

ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಸಿಕೆ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ತೋಳ್ಕಪ್ಪಿಯನ್ ತಿರುಮವಳವನ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.

ಈ ವಯಸ್ಸಿನಲ್ಲಿ ನನಗೆ ಈ ರೀತಿ ಮಾಡಿದ್ದಾರೆ ಎಂದು ದೇವೇಗೌಡರು ಹಾಸನದಲ್ಲಿ ಕಣ್ಣೀರು ಹಾಕಿರುವ ಬಗ್ಗೆ ಮಾಧ್ಯಮಗಳು  ಕೇಳಿದಾಗ, “ಅವರನ್ನು ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಹೀಗಾಗಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಇಲ್ಲ. ಅವರಿಗೆ ತಮ್ಮ ಕೊಡುಗೆ ಬಗ್ಗೆ ಹೇಳಲು ಆಗುವುದಿಲ್ಲ. ಅವರು ಏನೇ ಪ್ರಯತ್ನ ಮಾಡಲಿ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ ಮೂರು ಅಧಿಕೃತ, ಒಂದು ಅನಧಿಕೃತ ಸೀಟುಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ” ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button