Thursday, May 1, 2025
30.3 C
Bengaluru
LIVE
ಮನೆರಾಜಕೀಯಹೆಚ್ಚಿನ ಸಂಖ್ಯೆಯ ಮತದಾನಕ್ಕೆ ಪ್ರಧಾನಿ ಮೋದಿ ಕರೆ

ಹೆಚ್ಚಿನ ಸಂಖ್ಯೆಯ ಮತದಾನಕ್ಕೆ ಪ್ರಧಾನಿ ಮೋದಿ ಕರೆ

ಬೆಂಗಳೂರು: ಕರ್ನಾಟಕ ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಜನರು ಮತ ಚಲಾಯಿಸುತ್ತಿದ್ದಾರೆ. ಇದೇ ವೇಳೆ, ಸಾಮಾಜಿಕ ಮಾಧ್ಯಮ ಎಕ್​​ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ನರೇಂದ್ರ ಮೋದಿ , ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments