Thursday, September 11, 2025
23.5 C
Bengaluru
Google search engine
LIVE
ಮನೆಸುದ್ದಿಪೆನ್ ಡ್ರೈವ್ ಪ್ರಕರಣ: ತಪ್ಪಿತಸ್ಥರ ಬಂಧನಕ್ಕೆ ಕೆಆರ್‌ಎಸ್‌ ಒತ್ತಾಯ

ಪೆನ್ ಡ್ರೈವ್ ಪ್ರಕರಣ: ತಪ್ಪಿತಸ್ಥರ ಬಂಧನಕ್ಕೆ ಕೆಆರ್‌ಎಸ್‌ ಒತ್ತಾಯ

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ರಾಜಕಾರಣಿ ಒಬ್ಬರ ಅಶೀಲ ವಿಡಿಯೊ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ

ಎಚ್‌ಎಸ್ ಲಿಂಗೇಗೌಡ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗುವುದು ಜಿಲ್ಲೆಯ ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೊ ರೋ ಈಗಾಗಲೇ ಸಾಕಷ್ಟು ಸಾಮಾಜಿಕ ಜಾಲತಾಣ ಸೇರಿದಂತೆ ಪೆನ್ ಡ್ರೈವ್ ಗಳ ಮೂಲಕ ಹರಿದಾಡುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ

ಸೋಮೋಟೊ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಬೇಕಾಗಿತ್ತು ಆದರೆ ವಿಳಂಬವಾಗಿರುವ ಕಾರಣ ಪಕ್ಷದಿಂದ ದೂರು ನೀಡಲಾಗುವುದು ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಈ ಎಲ್ಲ ವಿಚಾರಗಳನ್ನು ಪರಮರ್ಶೆ ಮಾಡುವ ಮೂಲಕ ತಪ್ಪಿತಸ್ಥರ ವಿರುದ್ಧ

ಕಾನೂನು ಕ್ರಮ ಕೈಗೊಳ್ಳಬೇಕು ಈಗಾಗಲೇ ರಾಜ್ಯ ಮಹಿಳಾ ಆಯೋಗಕ್ಕೂ ದೂರು ಹೋಗಿದ್ದು ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಧಾವಿಸಬೇಕು ಸರ್ಕಾರ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments