Thursday, August 21, 2025
26.4 C
Bengaluru
Google search engine
LIVE
ಮನೆಕ್ರಿಕೆಟ್ಹಾರ್ದಿಕ್​ ಪಾಂಡ್ಯಗೆ ದಂಡ; ಪಂದ್ಯ ನಿಷೇಧದ ಭೀತಿ

ಹಾರ್ದಿಕ್​ ಪಾಂಡ್ಯಗೆ ದಂಡ; ಪಂದ್ಯ ನಿಷೇಧದ ಭೀತಿ

ಮುಂಬೈ:  ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 48ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024)​ ನಿಯಮದ ಪ್ರಕಾರ  ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಅಲ್ಲದೆ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ ದಂಡ ವಿಧಿಸಲಾಗುತ್ತದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ.

ಹೀಗಾಗಿ ಮುಂಬೈ ಇಂಡಿಯನ್ಸ್​ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ ತಲಾ 6 ಲಕ್ಷ ರೂ. ದಂಡ ಅಥವಾ ಪಂದ್ಯದ ಶುಲ್ಕದ 25% ರಷ್ಟು ದಂಡ ವಿಧಿಸಲಾಗಿದೆ. ಇದರ ಜೊತೆಗೆ ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂ. ಫೈನ್ ಹಾಕಲಾಗಿದೆ. ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಈ ತಪ್ಪನ್ನು 2ನೇ ಬಾರಿಗೆ ಪುನರಾವರ್ತಿಸಿದ ಕಾರಣ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಒಂದು ವೇಳೆ ಹಾರ್ದಿಕ್ ಪಾಂಡ್ಯ ಇದೇ ತಪ್ಪನ್ನು ಮೂರನೇ ಬಾರಿಗೆ ಮಾಡಿದರೆ ಒಂದು ಪಂದ್ಯದಿಂದ ನಿಷೇಧಕ್ಕೆ ಒಳಗಾಗಲಿದ್ದಾರೆ. ಈಗಾಗಲೇ 2 ಬಾರಿ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಪಾಂಡ್ಯ ಒಟ್ಟು 36 ಲಕ್ಷ ರೂ. ದಂಡ ಕಟ್ಟಿದ್ದು, ಮೂರನೇ ಬಾರಿ ಇದೇ ತಪ್ಪು ಮಾಡಿದರೆ 30 ಲಕ್ಷ ರೂ. ಫೈನ್​ನೊಂದಿಗೆ ಒಂದು ಪಂದ್ಯದ ನಿಷೇಧಕ್ಕೊಳಗಾಗಲಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪಾಂಡ್ಯ ಸ್ಲೋ ಓವರ್ ರೇಟ್​ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ.

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments