ರಾಜಕೀಯ

ಸಹಾಯ ಮಾಡದೆ ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಮಂಗಮಾಯ ಆಗುತ್ತೆ ಎಂದರು – ಡಿ.ಕೆ ಶಿವಕುಮಾರ್

ಉತ್ತರ ಕನ್ನಡ: ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಜನರ, ಬಡವರ ಪರವಾಗಿ ಇಲ್ಲವಾಗಿದೆ. ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು, ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿ 4 ಲಕ್ಷ ಜನ ಸತ್ತಿದ್ದಾರೆ. ಈಗ ವ್ಯಾಕ್ಸಿನ್ ತೆಗೆದುಕೊಂಡವರು ಸಾಯುವ ಕಾಲ ಬಂದಿದೆ. ಬಿಜೆಪಿಯವರು ಈ ವ್ಯಾಕ್ಸಿನ್ ಕೊಟ್ಟ ಕಂಪೆನಿಯಿಂದಲೂ ಲಂಚ ಹೊಡೆದಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಕೊರೋನಾ ಲಸಿಕೆ ಹಾಕಿಸಿಕೊಂಡವರಿಗೆ ಮೋದಿ ಫೋಟೊ ಇರುವ ಪ್ರಮಾಣ ಪತ್ರ ಕೊಟ್ಟರು. ಸತ್ತವರ ಸರ್ಟಿಫಿಕೆಟ್ಗೆ ಏಕೆ ಮೋದಿ ಫೋಟೋ ಹಾಕಿಲಿಲ್ಲ. ಜನಕ್ಕೆ ಏನೂ ಸಹಾಯ ಮಾಡದೆ ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಮಂಗಮಾಯ ಆಗುತ್ತೆ ಎಂದರು, ಏನೂ ಆಗಲಿಲ್ಲ. ಕೋರೋನಾ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಕೊಟ್ಟಿದ್ದೇನೆ ಎಂದು ಹೇಳಿತು. ಆ ಹಣ ಯಾರಿಗಾದರೂ ಬಂದಿದೆಯೇ?  ನಮ್ಮ ಕರಾವಳಿಯ ಕಾರ್ಪೋರೇಷನ್ ಬ್ಯಾಂಕ್, ವಿಜಯಾ ಬ್ಯಾಂಕ್ ಅನ್ನು ಬೇರೆ ಬ್ಯಾಂಕ್ ಗಳ ಜೊತೆ ವಿಲೀನ ಮಾಡಿ ಒಂದೂ ಬ್ಯಾಂಕ್ ಇಲ್ಲದಂತೆ ಮಾಡಿದ್ದು ಬಿಜೆಪಿ ಸಾಧನೆ ಎಂದರು.

ಕೋರೋನಾ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಜದ ಎಲ್ಲಾ ವರ್ಗದ ಕಾರ್ಮಿಕರಿಗೆ 10 ಸಾವಿರ ಸಹಾಯಧನ ನೀಡಿ ಎಂದು ಮನವಿ ಮಾಡಿದರು ಕೊಡಲಿಲ್ಲ. ಆನಂತರ ಒಂದಷ್ಟು ಜನಕ್ಕೆ 5 ಸಾವಿರ ಕೊಟ್ಟು ಕೈತೊಳೆದುಕೊಂಡರು.

ನಾವು ಗೃಹಲಕ್ಷ್ಮಿ ಮೂಲಕ ವರ್ಷಕ್ಕೆ 24 ಸಾವಿರ ಕೊಡುತ್ತಿದ್ದೇವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 1 ಲಕ್ಷ ಕೊಡುತ್ತೇವೆ. ಯುವಕರಿಗೆ 1 ಲಕ್ಷ, ರೈತರ ಸಾಲ ಮನ್ನಾ, 25 ಲಕ್ಷ ಆರೋಗ್ಯ ವಿಮೆ ಕೊಡುತ್ತೇವೆ. ಕಾಂಗ್ರೆಸ್ ಪಕ್ಷ ಕರ್ನಾಟಕ ಮಾತ್ರವಲ್ಲ ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟ ಗೆಲ್ಲಲಿದೆ. ಕರ್ನಾಟಕದಿಂದ 6 ಜನ ಮಹಿಳೆಯರಿಗೆ ಟಿಕೆಟ್ ಕೊಟ್ಟಿದ್ಧೇವೆ. ಕರ್ನಾಟಕದ ದನಿಯಾಗಿ ಇವರೆಲ್ಲಾ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯಿಂದ ದೇಶದ ಯಾರಿಗೂ ಒಳ್ಳೆಯದಾಗಿಲ್ಲ. ರೈತರ ಆದಾಯ ಡಬಲ್ ಆಗಿಲ್ಲ, ಉದ್ಯೋಗವಿಲ್ಲ. ಬಿಜೆಪಿಯವರು ಮನೆಯ ಬಳಿ ಬಂದರೆ ಕೇಳಬೇಕು ಏನಾದರೂ ಅನುಕೂಲ ಆಗಿದೆಯೇ? ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಜನಕ್ಕೆ ಒಳ್ಳೆಯದಾಗಬೇಕು. ಅನುಕೂಲವಾಗಬೇಕು, ಕಷ್ಟಕ್ಕೆ ನೆರವಾಗಬೇಕು, ಊರಿಗೆ ಅಥವಾ ವೈಯಕ್ತಿಕವಾಗಿ ಒಳ್ಳೆಯದಾಗಬೇಕು ಆದರೆ ಬಿಜೆಪಿಯಿಂದ ಏನೂ ಒಳ್ಳೆಯದಾಗಿಲ್ಲ ಎಂದು ಕಿಡಿಕಾರಿದರು.

Comments (0)

Your email address will not be published. Required fields are marked *

Back to top button